Belagavi: ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆ ಶರಣಾದ ಯುವಕ!

Belagavi: ಬೆಳಗಾವಿ (Belagavi) ಕುಂದಾನಗರಿ ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಿಸಿಯ ಕತ್ತು ಸೀಳಿ ಬರ್ಬರವಾಗಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾ. 4ರಂದು ನಡೆದಿದೆ.

ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವತಿಯನ್ನು ಐಶ್ವರ್ಯಾ ಮಹೇಶ್ ಲೋಹಾರ(18) ಎಂದು ಗುರುತಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರನನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಎಂದು ಗುರುತಿಸಲಾಗಿದೆ.
ಐಶ್ವರ್ಯಾ ಹಾಗೂ ಪ್ರಶಾಂತ್ ಇಬ್ಬರೂ ಐಶ್ವರ್ಯಾ ಚಿಕ್ಕಮ್ಮನ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೇ ಸಮಯ ಪ್ರಶಾಂತ್ ಚಾಕುವಿನಿಂದ ಪ್ರೇಯಸಿ ಐಶ್ವರ್ಯಾ ಮಹೇಶ್ ಲೋಹಾರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡು ಪ್ರಶಾಂತ್ ಪ್ರಾಣ ಬಿಟ್ಟಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮಾಹಿತಿ ಪ್ರಕಾರ, ಐಶ್ವರ್ಯಾ ಹಾಗೂ ಪ್ರಶಾಂತ್ ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Comments are closed.