Bantwala: ಬಸ್- ಕಾರು ಡಿಕ್ಕಿ; ಕಾರು ಚಾಲಕನಿಗೆ ಗಂಭೀರ ಗಾಯ

Bantwala: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ಇಂದು (ಮಾ.5) ಖಾಸಗಿ ಸಿ.ಸಿ.ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕೇರಳ ಮೂಲದ ವಿಶ್ವನಾಥ ಶೆಟ್ಟಿ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಕಾರು ಬಿಸಿ ರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದು, ಮೆಲ್ಕಾರ್-ಪಾಣೆಮಂಗಳೂರು ಕಡೆಯಿಂದ ಖಾಸಗಿ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದಿದ್ದು, ಬಸ್ ಚಾಲಕನ ನಿಯಮ ಮೀರಿದ ಚಾಲನೆ ಘಟನೆಗೆ ಕಾರಣ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ ಗೊಂಡಿದೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Comments are closed.