India: ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲಿಗೆ ಪ್ರವೇಶಿಸಿದ ಭಾರತ!

Share the Article

India: ಭಾರತ (India) ತಂಡ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಸೋಲಿಗೆ ಸೇಡು ತೀರಿಸಿದೆ ಅಂದರೆ ತಪ್ಪಾಗಲಾರದು.

ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 264 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ 48.1 ಓವರ್‌ಗಳಲ್ಲಿ 267 ರನ್‌ ಹೊಡೆಯುವ ಮೂಲಕ ಫೈನಲ್‌ ಪ್ರವೇಶಿಸಿದೆ.

ವಿರಾಟ್‌ ಕೊಹ್ಲಿ 84 ರನ್‌ (98 ಎಸೆತ, 5 ಬೌಂಡರಿ), ಶ್ರೇಯಸ್‌ ಅಯ್ಯರ್‌ 45 ರನ್‌(62 ಎಸೆತ, 3 ಬೌಂಡರಿ), ಕೆಎಲ್‌ ರಾಹುಲ್‌ ಔಟಾಗದೇ 42 ರನ್‌ (34 ಎಸೆತ, 2 ಬೌಂಡರಿ, 2 ಸಿಕ್ಸ್‌), ಹಾರ್ದಿಕ್‌ ಪಾಂಡ್ಯ 28 ರನ್‌ (24 ಎಸೆತ, 1 ಬೌಂಡರಿ, 3 ಸಿಕ್ಸ್‌) ಹೊಡೆಯುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.

ಭಾರತ ಫೈನಲ್‌ ಪ್ರವೇಶಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ವಿರಾಟ್‌ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿದೆ. ಇನ್ನು ಎರಡನೇ ಸೆಮಿಫೈನಲ್‌ ಪಂದ್ಯ ಮಂಗಳವಾರ ನ್ಯೂಜಿಲೆಂಡ್‌ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ನಡೆಯಲಿದೆ. ಈ ಪಂದ್ಯದಲ್ಲಿ ವಿಜೇತರಾದವರು ಭಾನುವಾರ ದುಬೈ ಮೈದಾನದಲ್ಲಿ ಭಾರತವನ್ನು ಎದುರಿಸಲಿದ್ದಾರೆ.

Comments are closed.