BJP: ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಡೇಟ್ ಫಿಕ್ಸ್!!

BJP: ರಾಜ್ಯದಲ್ಲಿ ಬಿಜೆಪಿ ನಾಯಕರ ಬಣಜಗಳದಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ಮಾಡುವುದಾಗಿ ಹೈಕಮಾಂಡ್. ಈ ಹಿನ್ನಲೆಯಲ್ಲಿ ಈಗ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ.

ಹೌದು, ಹೋಳಿ ಹಬ್ಬದ ಒಳಗಾಗಿಯೇ ಹೈಕಮಾಂಡ್, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸಿದ್ಧತೆ ಮಾಡಿದ್ದು, ಕರ್ನಾಟಕ ಸೇರಿದಂತೆ ಆಯ್ದ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾ.14ರೊಳಗೆ ಚುನಾವಣೆಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಕರ್ನಾಟಕದಲ್ಲಿ ಮಾ.12 ಇಲ್ಲವೇ 15ರ ಒಳಗಾಗಿ ಚುನಾವಣೆ ನಡೆಯುವುದು ಬಹುತೇಕ ನಿಗದಿಯಾಗಿದೆಯಂತೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ & ಟೀಂ ನಡುವಿನ ಸಂಘರ್ಷಕ್ಕೆ ಕೊಂಚ ವಿರಾಮ ಬೀಳುವ ದಿನಗಳು ಸಮೀಪಿಸಿದಂತಿದೆ.
Comments are closed.