Mangaluru: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ!

Mangaluru: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಗಾಳಿ ಅಬ್ಬರ ಜೋರಾಗಿದ್ದು, ಮುಖ್ಯವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ದಿನಗಳಿಂದ ಭಾರೀ ಬಿಸಿಲಿನ ಉರಿಯಿಂದಾಗಿ ಮೋಡಗಳು ಸೃಷ್ಟಿಯಾಗುತ್ತಿವೆ. ದಕ್ಷಿಣ ಕನ್ನಡ, ಉಡುಪಿ (Mangaluru) ಜಿಲ್ಲೆಯಲ್ಲಿ ಸ್ಥಳೀಯವಾಗಿ ಮೋಡ ಉಂಟಾಗಿ ಸದ್ಯವೇ ಮಳೆಯಾಗುವ ಸಾಧ್ಯತೆ ಇದೆ. ಬಳಿಕ ಗರಿಷ್ಠ ಉಷ್ಣಾಂಶವೂ ತುಸು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .
Comments are closed.