Ranya Rao Case: ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ; ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ

Ranya Rao: ನಟಿ ರನ್ಯಾ ರಾವ್‌ ಅವರು ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದರು. ನಟಿಯ ಮೇಲೆ 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪವಿದೆ. ಈಗಾಗಲೇ ನಟಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಡಿಆರ್‌ಐ ಅಧಿಕಾರಿಗಳು ರನ್ಯಾ ಬಂಧನದ ನಂತರ ಆಕೆಯ ಮನೆಯಲ್ಲಿ ಪರಿಶೀಲನೆ ಮಾಡಿದ್ದು, ಐದಕ್ಕೂ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. 3 ದೊಡ್ಡ ಪೆಟ್ಟಿಗೆಯನ್ನು ನಗದು ಹಣ ಮತ್ತು ಚಿನ್ನವನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದರು. ರನ್ಯಾ ಮನೆಯಲ್ಲಿ 2.06 ಕೆಜಿ ಚಿನ್ನ, 2.67 ಕೋಟಿ ನಗದು ಹಣ ಪತ್ತೆಯಾಗಿದೆ.

ಹದಿನೈದು ದಿನಗಳ ಅಂತರದಲ್ಲಿ ನಾಲ್ಕು ಬಾರಿ ಗಲ್ಫ್‌ ದೇಶಕ್ಕೆ ಹೋಗಿದ ನಟಿ, ಪ್ರತಿ ಬಾರಿ ರನ್ಯಾ ವಿಮಾನ ನಿಲ್ದಾಣಕ್ಕೆ ಹೋದಾಗಲೂ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್‌ ಪ್ರೋಟೋಕಾಲ್‌ ಸರ್ವಿಸನ್ನು ಬಳಸಿ ಸೆಕ್ಯುರಿಟಿ ಚೆಕ್‌ ಮೂಲು ತಪ್ಪಿಸಿಕೊಳ್ಳುತ್ತಿದ್ದರಂತೆ. ಪ್ರತಿ ಬಾರಿ ಚಿನ್ನ ಕಳ್ಳಸಾಗಣೆಗೆ ಹೋದಾಗ ಒಂದೇ ರೀತಿಯ ಬಟ್ಟೆ ಹಾಕಿಕೊಂಡು ಹೋಗುತ್ತಿದ್ದು, ಬೆಲ್ಟ್‌ನ ಒಳಗೆ ಚಿನ್ನದ ಗಟ್ಟಿಗಳನ್ನು ಇಟ್ಟುಕೊಂಡು, ಆ ಬೆಲ್ಟ್‌ ಹೊರಗೆ ಕಾಣದ ರೀತಿಯಲ್ಲಿ ಬಟ್ಟೆ ಹಾಕಿಕೊಂಡು ಬರುತ್ತಿದ್ದರಂತೆ ರನ್ಯಾ.

ಹೀಗಾಗಿ ನಟಿಯ ಮೇಲೆ ಯಾರಿಗೂ ಅನುಮಾನ ಬಂದಿರಲಿಲ್ಲ. ಆದರೆ ದೆಹಲಿಯ ಡಿಆರ್‌ಐ ಅಧಿಕಾರಿಗಳಿಗೆ ಅನುಮಾನ ಬಂದು ತಪಾಸಣೆ ಮಾಡಿದಾಗ ಅಕ್ರಮ ಚಿನ್ನ ಸಾಗಣೆಯ ವಿಷಯ ಬಹಿರಂಗವಾಗಿದೆ.

ಕಳೆದ ವರ್ಷದಿಂದ ಈಕೆ 30-40 ಬಾರಿ ದುಬೈಗೆ ಹೋಗಿ ಬಂದಿದ್ದು, ಅಲ್ಲದೆ ಹದಿನೈದು ದಿನಗಳಿಗೊಮ್ಮೆ ದುಬೈ ಪ್ರಯಾಣವೇ ಡಿಆರ್‌ಐ ಅಧಿಕಾರಿಗಳ ಅನುಮಾನಕ್ಕೆ ಮೂಲ ಕಾರಣವಾಗಿದೆ. ಗೋಲ್ಡ್‌ ಸ್ಮಗ್ಲಿಂಗ್‌ ಒಂದು ವ್ಯವಸ್ಥಿತ ಜಾಲ. ರನ್ಯಾ ಸಂಪರ್ಕದಲ್ಲಿದವರ ಶೋಧನೆ ಮುಂದುವರೆಸಿದರೆ ಮತ್ತಷ್ಟು ವಿಷಯಗಳು ಬೆಳಕಿಗೆ ಬರುತ್ತದೆ ಎಂದು ಮೂಲಗೂ ತಿಳಿಸಿದೆ.

ನಟಿ ರನ್ಯಾ ಬಳಿ ಪತ್ತೆಯಾದ ಬಂಗಾರದ ಮೂಲ ಶೋಧಿಸಿದರೆ ಇನ್ನಷ್ಟು ಗಣ್ಯರ ಮಕ್ಕಳು ಸಿಕ್ಕಿಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಶ್ರೀಮಂತರ ಮಕ್ಕಳ ʼಹೈಟೆಕ್‌ʼ ವ್ಯವಹಾರ ಇದು ಎಂದು ಹೇಳಲಾಗಿದೆ. ರನ್ಯಾ ದುಬೈನಿಂದ ಸುಮಾರು 12 ಕೋಟಿ ಮೌಲ್ಯದ 14.8 ಕೆಜಿ ಚಿನ್ನ ಕಳ್ಳ ಸಾಗಣೆ ಮಾಡಿದ್ದಾರೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಚಿನ್ನ ಖರೀದಿಗೆ ಆಕೆಯ ಬಳಿ ಭಾರೀ ಪ್ರಮಾಣದ ಹಣ ಬೇಕು. ಅದು ಎಲ್ಲಿಂದ ಬಂತು ? ಎನ್ನುವ ಪ್ರಶ್ನೆ ಈಗ ಮೂಡಿದೆ. ಅಕ್ರಮ ಹಣ ವರ್ಗಾವಣೆ ನಡೆದಿದೆಯೇ ಎನ್ನುವ ಶಂಕೆ ವ್ಯಕ್ತವಾಗಿದೆ.

ತನ್ನ ಪತಿ ಜಿತಿನ್‌ ಹುಕ್ಕೇರಿ ಜೊತೆ ದುಬೈನಿಂದ ಕೆಐಎಗೆ ಸೋಮವಾರ ರಾತ್ರ 7 ರ ಸುಮಾರಿಗೆ ಬಂದಿಳಿದ ರನ್ಯಾ ಅವರನ್ನು ಡಿಆರ್‌ಇ ಅಧಿಕಾರಿಗಳು ಬಂಧನ ಮಾಡಿದ್ದರು. ರನ್ಯಾ ಇದೀಗ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲ್‌ನಲ್ಲಿದ್ದಾರೆ. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆಕೆ ನಮ್ಮ ಗೌರವ ಮಣ್ಣುಪಾಲು ಮಾಡಿದ್ದಾಳೆ. ಕೆಲ ತಿಂಗಳ ಹಿಂದೆ ಆರ್ಕಿಟೆಕ್ಟ್‌ ಒಬ್ಬರನ್ನು ವಿವಾಹವಾಗಿದ್ದು, ಆಗಿನಿಂದ ನಮ್ಮ ಜೊತೆ ಆಕೆಯ ಸಂಬಂಧವಿಲ್ಲ. ಆಕೆ ಮಾಡಿದ ತಪ್ಪಿಗೆ ಶಿಕ್ಷೆ ಆಗಲಿ ಎಂದು ರನ್ಯಾ ಮಲೆ ತಂದೆ ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿ ಹೇಳಿದ್ದಾರೆ ಎಂದು ಕೆಲವೊಂದು ಮಾಧ್ಯಮಗಳು ವರದಿ ಮಾಡಿರುವ ಕುರಿತು ಪ್ರಕಟವಾಗಿದೆ.

Comments are closed.