Mangaluru: ಪಿಯು ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣ; ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ

Mangaluru: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ.25 ರಂದು
ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದು, ಈ ಪ್ರಕರಣ ಕುರಿತಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ಮಾಡಲಾಗಿದ್ದು ಮಾರ್ಚ್ 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಆದೇಶಿಸಲಾಗಿದೆ. ಮಾರ್ಚ್ 13 ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಫೆ.25 ರ ಸಂಜೆ ನಾಪತ್ತೆಯಾಗಿದ್ದ ದಿಗಂತ್, ಫರಂಗಿಪೇಟೆ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿದ್ದ. ಅತ್ತ ದೇವಸ್ಥಾನಕ್ಕೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಅನಂತರ ಫರಂಗಿಪೇಟೆಯಲ್ಲಿ ರೈಲ್ವೆ ಹಳಿಯಲ್ಲಿ ಚಪ್ಪಲಿ, ಮೊಬೈಲ್ ಪತ್ತೆಯಾಗಿತ್ತು. ಚಪ್ಪಲಿಯಲ್ಲಿ ರಕ್ತದ ಕಲೆ ಕೂಡಾ ಇತ್ತು. ಇದು ಸಾಕಷ್ಟು ಅನುಮಾನಕ್ಕೆ ಕಾರಣ ಉಂಟು ಮಾಡಿದೆ.
Comments are closed.