ಮಾ 8 ರಂದು ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

Puttur: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ ‘ಫಿಲೋ ಮಿಲನ – 2025’ ಕಾರ್ಯಕ್ರಮವು ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ
ವಂ. ಫಾ. ವಿಜಯ್ ಲೋಬೋ ವಹಿಸಲಿದ್ದು, ಗೌರವ ಅತಿಥಿಗಳಾಗಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್. ಡಿ ಕೋಸ್ಟಾ, ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ ವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.