Ram Gopal Varma: ರಾಮ್ ಗೋಪಾಲ್ ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್!

Ram Gopal Varma: ಖ್ಯಾತ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಈ ಮೂಲಕ ವರ್ಮಾ ಬಂಧನ ನಿಶ್ಚಯವಾಗಿದೆ. ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನಿರ್ದೇಶಕ ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.
ಮುಂಬೈನ ಕೆಳಹಂತದ ನ್ಯಾಯಾಲಯವು ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ಮಾಡುತ್ತಿದ್ದು, ಜನವರಿಯಲ್ಲಿಯೇ ಅಪರಾಧಿ ಎಂದು ಘೋಷಣೆ ಮಾಡಿ ಮೂರು ತಿಂಗಳ ಸಾಧಾರಣ ಶಿಕ್ಷೆ ವಿಧಿಸಿದೆ. ಆದರೆ ಇಲ್ಲಿಯವರೆಗೆ ವರ್ಮಾ ನ್ಯಾಯಾಲಯದ ಎದುರಾಗಲಿ, ಪೊಲೀಸರ ಎದುರಾಗಲಿ ಹಾಜರಾಗಿಲ್ಲ. ಹೀಗಾಗಿ ನ್ಯಾಯಾಲಯವು ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಘಟನೆ ವಿವರ:
2018 ರಲ್ಲಿ ಮುಂಬೈ ಮೂಲಕ ಕಂಪನಿಯೊಂದು ರಾಮ್‌ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲು ಮಾಡಿತ್ತು. ಈ ಪ್ರಕರಣದಲ್ಲಿ ರಾಮ್ ಗೋಪಾಲ್ ವರ್ಮಾ ತಪ್ಪಿತಸ್ಥ ಎಂದು ತೀರ್ಪನ್ನು ನೀಡಿತ್ತು. ಮೂರು ತಿಂಗಳ ಸಾಧಾರಣ ಜೈಲು ಶಿಕ್ಷೆ ಮತ್ತು 3.72 ಲಕ್ಷ ರೂ. ಹಣ ಮರುಪಾವತಿ ಮಾಡಲು ಸೂಚನೆ ನೀಡಿತ್ತು. ಆದರೆ ಫೆ.15 ರಂದು ವರ್ಮಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಶಿಕ್ಷೆ ಕಡಿತಗೊಳಿಸುವಂತೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ನ್ಯಾಯಾಲಯವು ತಳ್ಳಿ ಹಾಕಿದೆ.
Comments are closed.