Putturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “
				
Putturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ ನಡೆಯಿತು

ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತೂರಿನ ಮುಳಿಯ ಜುವೆಲ್ಲರ್ಸ್ ನ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ರವರು ಮಾತನಾಡುತ್ತ, ಇಂದಿನ ಯುವಕರ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ಕೌಶಲ್ಯ ಅಭಿವೃದ್ಧಿಗೆ ಸಮಗ್ರ ವಿಧಾನ ಅತ್ಯಗತ್ಯ. ಇದು ಶೈಕ್ಷಣಿಕ ಶಿಕ್ಷಣವನ್ನು ಮೀರಿದೆ ಮತ್ತು ವಿಮರ್ಶಾತ್ಮಕ ಚಿಂತನೆ, ಸಮಸ್ಯೆ-ಪರಿಹರಿಸುವುದು, ಸಂವಹನ ಮತ್ತು ಹೊಂದಾಣಿಕೆಯ0ತಹ ಪ್ರಾಯೋಗಿಕ ಕೌಶಲ್ಯಗಳನ್ನು ಒಳಗೊಳ್ಳುತ್ತದೆ. ನಾವೀನ್ಯತೆಯನ್ನು ಉತ್ತೇಜಿಸುವ ಮೂಲಕ ಮತ್ತು ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವ ಮೂಲಕ ಈ ರೀತಿಯ ಕೌಶಲ್ಯಗಳು ಸಾಮಾಜಿಕ ಪ್ರಗತಿಗೆ ಕೊಡುಗೆ ನೀಡುತ್ತದೆ. ಎಂದು ಹೇಳಿದರು.
ಹಿಂದೂ ಎಕನಾಮಿಕ್ ಫೋರಮ್ ಇದರ ಪುತ್ತೂರು ಘಟಕದ ಅಧ್ಯಕ್ಷರಾದ ರವಿಕೃಷ್ಣ ಡಿ ಕಲ್ಲಾಜೆ ಇವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ದೇಶವನ್ನು ಮುನ್ನಡೆಸುವ ಜವಾಬ್ದಾರಿಯು ಯುವ ಸಮುದಾಯಕ್ಕೆ ಇದೆ.ಆದ್ದರಿಂದ ನಮ್ಮ ಯುವ ಸಮೂಹವನ್ನು ಹೊಸಕಾಲದ ಕೌಶಲಗಳೊಂದಿಗೆ ಸಶಕ್ತರೂ ಸಮರ್ಥರನ್ನಾಗಿ ಬೆಳೆಸುವ ಅಗತ್ಯವಿದೆ.ಈ ತರಬೇತಿಯನ್ನು ವಿದ್ಯಾರ್ಥಿಗಳ ನೈಜ ಜಗತ್ತಿನ ಕೌಶಲ್ಯ ಮತ್ತು ಜ್ಞಾನವನ್ನು ಸಂಯೋಜಿಸಲು ವಿನ್ಯಾಸಗೊಳಿಸಲಾಗಿದೆ, ವೇಗವಾಗಿ ವಿಕಸನಗೊಳ್ಳುತ್ತಿರುವ ಉದ್ಯೋಗ ಮಾರುಕಟ್ಟೆಯಲ್ಲಿ ನಮ್ಮ ವಿದ್ಯಾರ್ಥಿಗಳನ್ನು ಯಶಸ್ವಿ ವೃತ್ತಿಜೀವನಕ್ಕೆ ಸಿದ್ಧಪಡಿಸುತ್ತದೆ. ಒಳ್ಳೆಯ ಹವ್ಯಾಸಗಳ ಜೊತೆಗೆ ಕ್ರಿಯಾಶೀಲರಾಗಿ ಅಭ್ಯಾಸದಕಡೆ ಗಮನ ಹರಿಸಿದರೆ ಮಾತ್ರ ಉತ್ತಮ ಭವಿಷ್ಯತ್ತಿಗೆ ನಾಂದಿಯಾಗುತ್ತದೆ.ಈ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಉತ್ತಮವಾಗಿ ಸಾಗಿಸಬೇಕು. ಎಂದು ಹೇಳಿದರು.
			
Comments are closed.