ನಿವೃತ್ತ ಡಿ.ಎಫ್.ಓ, ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ

Share the Article

Belthangady: ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಮಾಜಿ ಶಾಸಕ ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು.

ಇವರು ಪತ್ನಿ ಇಂದಿರಾ, ಪುತ್ರರಾದ ಸೂರಜ್, ಸುಧೀರ್, ಸುಜಿತ್ ಮತ್ತು ಕುಟುಂಬಸ್ಥರನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Comments are closed.