Mangaluru: ಆಟೋರಿಕ್ಷಾದಲ್ಲಿ ಎಂಡಿಎಂಎ ಸಾಗಾಟ- ರಿಕ್ಷಾ ಚಾಲಕ ಅರೆಸ್ಟ್!

Mangaluru: ಆಟೋರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ. ಈತನಿಂದ 75ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಆರೋಪಿ ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32ವ) ಎಂಬಾತನನ್ನು ಬಂಧನ ಮಾಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಐದು ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ತಂದು, ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಆಟೋರಿಕ್ಷಾದಲ್ಲಿ ಮಾರಾಟ ಮಾಡುತ್ತಿದ್ದ ಕುರಿತು ಅರಿತ ಸಿಸಿಬಿ ಪೊಲೀಸರು ಮಂಗಳವಾರ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಬಂಧನ ಮಾಡಿದ್ದಾರೆ.
Comments are closed.