Karnataka Budget 2025-26: ಸಿನಿಪ್ರಿಯರಿಗೆ ಗುಡ್ನ್ಯೂಸ್; ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರ, ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ

Karnataka Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ.

ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವ ಧನ ಒಂದು ಸಾವಿರ ಹೆಚ್ಚಳ ಮಾಡಿದ್ದಾರೆ. ಸರಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು ಎರಡು ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
ರಾಜ್ಯದ ಮಲ್ಟಿಫ್ಲೆಕ್ಸ್ ಗಳಲ್ಲಿ ಏಕರೂಪದ ದರ ನಿಗದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಸಿನಿಮಾಗೆ ರೂ.200 ದರ ನಿಗದಿ ಗೊಳಿಸಲಾಗಿದೆ.
Comments are closed.