Admission Rules : ಹೊಸದಾಗಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ – ಶಿಕ್ಷಣ ಸಚಿವರಿಂದ ಹೊಸ ಭರವಸೆ

Share the Article

Admission Rules: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದ್ದು, ಇದರಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗ ಈ ನಿಯಮದ ಕುರಿತಾಗಿ ಹೊಸದಾಗಿ ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ ಪೋಷಕರಿಗೆ ಶಿಕ್ಷಣ ಸಚಿವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಹೌದು, ಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಪಡೆಯಲು ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಹೌದು, ಕೇಂದ್ರ ಶಿಕ್ಷಣ ಇಲಾಖೆಯೂ 2025-26ರಿಂದಲೇ ಈ ಆದೇಶ ಜಾರಿಯಾಗಬೇಕೆಂದು ಎಲ್ಲಾ ರಾಜ್ಯಗಳಿಗೆ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ತಿಳಿಸಿತ್ತು. ರಾಜ್ಯ ಸರ್ಕಾರ ಈಗಾಗಲೇ 5.5 ವರ್ಷ ನಿಗದಿಗೊಳಿಸಲಾಗಿತ್ತು. ಇದರಿಂದ ಪೋಷಕರು ಹಾಗೂ ಶಾಲಾ ಸಿಬ್ಬಂದಿಯಲ್ಲಿ ಗೊಂದಲ ಉಂಟಾಗಿತ್ತು. ಆದರೆ ಈಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಮಾತನಾಡಿದ್ದು ಮುಂದಿನ ಎರಡ್ಮೂರು ದಿನಗಳ ಒಳಗಾಗಿ ಈ ಬಗ್ಗೆ ನಿರ್ಧಾರ ಆಗಲಿದೆ. ಸದ್ಯದಲ್ಲೇ ಶುಭ ಸುದ್ದಿ ನೀಡುತ್ತೇವೆ ಎಂದು ಪೋಷಕರಿಗೆ ಭರವಸೆ ನೀಡಿದ್ದಾರೆ.

ಈ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಮಕ್ಕಳಿಗೆ, ಪೋಷಕರಿಗೆ ತೊಂದರೆಯಾಗಬಾರದು. ಅದರಲ್ಲೂ ಯಾವುದೇ ಮಗುವಿನ ವರ್ಷಗಳು ವೇಸ್ಟ್ ಆಗಬಾರದು. ಈ ಸಂಬಂಧ ಎರಡು ದಿನ ಸಭೆ ಮಾಡಿದ್ದೇವೆ. ಮುಂದಿನ ಎರಡರ ಮೂರು ದಿನಗಳ ಒಳಗೆ ಒಳ್ಳೆಯ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಈ ಸುದ್ದಿ ಪೋಷಕರಿಗೆ ಕೊಂಚ ನಿರಾಳ ಎನಿಸಿದೆ.

Comments are closed.