Siddaramaiah: ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ, ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ: ಸಿಎಂ ಬಜೆಟ್

Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 16ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಯೋಜನೆ ನೀಡುವುದರ ಮೂಲಕ ಸರಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಮತ್ತು ಶಾಲಾ ಮಕ್ಕಳಿಗೆ ವಿವಿಧ ಸವಲತ್ತುಗಳನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಟನಲ್ ಯೋಜನೆಗೆ 40,000 ಕೋಟಿ ನೀಡಲಾಗಿದ್ದು, ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲು ಇಡಲಾಗಿದೆ. ಇನ್ನು ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವದನ ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡಿದ್ದು, ಸರಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರ ಗೌರವ ಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
Comments are closed.