KEA ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಹೊಸ ರೂಲ್ಸ್ – ಇನ್ಮುಂದೆ ಹೀಗಿರುತ್ತೆ ಪ್ರಶ್ನೆ ಪತ್ರಿಕೆ!!

Share the Article

KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವಂತಹ  ಇದೀಗ ಹೊಸ ರೂಲ್ಸ್ ಜಾರಿಯಾಗಿದ್ದು ಇನ್ನು ಮುಂದೆ ಒಂದು ಪ್ರಶ್ನೆಗೆ 5 ಆಯ್ಕೆಗಳನ್ನು ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಹೌದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದೆ. ಇದುವರೆಗೂ ಒಂದು ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ನೀಡಲಾಗುತ್ತಿತ್ತು. ಆದರೆ ಈಗ ಈ ನಿಯಮದಲ್ಲಿ ಬದಲಾವಣೆ ಮಾಡಿಕೊಂಡಿದ್ದು ಇನ್ನು ಮುಂದೆ ಪ್ರಶ್ನೆಗೆ ಐದು ಆಯ್ಕೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಕೆಇಎ, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಒಂದು ಪ್ರಶ್ನೆಗೆ ಉತ್ತರವಾಗಿ ಐದು ಆಯ್ಕೆಯನ್ನು ಕೊಡಲಿದೆ. ಇನ್ಮುಂದೆ ನಡೆಯುವಂತ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಈ ಹೊಸ ನಿಯಮ ಅನ್ವಯ ಆಗಲಿದೆ ಎಂದಿದೆ.

Comments are closed.