Kalburgi: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ; ನಾಲ್ವರು ಯುವಕರು ಸಾವು

Share the Article

Kalburgi: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 2 ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಸಿದ್ದು, ಸರೇಶ್‌ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್‌ ಪೂಜಾರಿ ಮೃತರು.

ಸೇಡಂನಿಂದ ಆಬಾಳ್‌ ಕಡೆ ಹೊರಟಿದ್ದ ಒಂದು ಬೈಕ್‌ಗೆ ಎದುರಿಗೆ ಬಂದ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Comments are closed.