Bantwala: ನಾನಾಗಿ ಹೋಗಿಲ್ಲ, ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋದ್ರು- ದಿಗಂತ್

Bantwala: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8 ರ (ಇಂದು) ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿಯ ಡಿ ಮಾರ್ಟ್ನಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ 12 ದಿನಗಳ ಬಳಿಕ ಪತ್ತೆಯಾಗಿದ್ದಾನೆ.

ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದ ದಿಗಂತ್ ನಾಪತ್ತೆ ಪ್ರಕರಣಕ್ಕೆ ಇದೀಗ ತೆರೆ ಬಿದ್ದಿದೆ. ಉಡುಪಿ ನಗರದ ಡಿ ಮಾರ್ಟ್ನಲ್ಲಿ ತಿರುಗಾಡುತ್ತಿದ್ದಾಗ ಪತ್ತೆಯಾಗಿರುವ ದಿಗಂತ್ನನ್ನು ಪೊಲೀಸರು ಬಂಟ್ವಾಳಕ್ಕೆ ಕರೆದುಕೊಂಡು ಬರುತ್ತಿದ್ದಾರೆ.
ಇತ್ತ ದಿಗಂತ್ ತನ್ನ ತಾಯಿಗೆ ಕರೆ ಮಾತನಾಡಿರುವ ವಿದ್ಯಾರ್ಥಿ ದಿಗಂತ್, ” ಉಡುಪಿಯಲ್ಲಿ ಸುರಕ್ಷಿತವಾಗಿ ಇದ್ದೇನೆಂದು ಹೇಳಿದ್ದಾನೆ. ದಿಗಂತ್ ನಾನಾಗಿ ಹೋಗಿಲ್ಲ, ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋದ್ರು” ಎಂದು ಹೇಳಿದ್ದಾನೆ ಎನ್ನಲಾಗಿದೆ.
ಫೆ.25 ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದೆಂದು ಮನೆಯಲ್ಲಿ ಹೇಳಿದ ವಿದ್ಯಾರ್ಥಿ ಅನಂತರ ದೇವಸ್ಥಾನಕ್ಕೆ ಹೋಗದೇ, ಇತ್ತ ಮನೆಗೂ ಮರಳದೆ ನಾಪತ್ತೆಯಾಗಿದ್ದ. ಅಲ್ಲದೇ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.
Comments are closed.