Belthangady: ಬೆಳ್ತಂಗಡಿ: ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ!

Belthangady: ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಬೆಲೆ ಬಾಳುವ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ (Belthangady) ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ – ಕೊಲ್ಲಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಬೆಳ್ತಂಗಡಿ ಕಡೆಗೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಅಶೋಕ್ ಲೈಲಾಂಡ್ ಕಂಪನಿಯ ΚΑ-19-AE-6067 ಸಂಖ್ಯೆಯ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ(FMS) ಅಧಿಕಾರಿಗಳಿಗೆ ಖಚಿತ ಮಾಹಿತಿ ದೊರೆತ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ತಂಡ ಮಾ.6 ರಂದು ರಾತ್ರಿ ಸುಮಾರು 8:45 ಕ್ಕೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ರಸ್ತೆಯಲ್ಲಿ ಲಾರಿಯನ್ನು ತಡೆದು ತಪಾಸಣೆ ಮಾಡಿದಾಗ ಯಾವುದೇ ದಾಖಲೆ ಇಲ್ಲದೆ ಸಾಗಾಟ ಮಾಡಿರುವುದು ಪತ್ತೆಯಾಗಿದೆ.
Comments are closed.