Crime: ಕೊಪ್ಪಳ: ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ

Share the Article

Crime: ಇಸ್ರೇಲ್‌ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್‌ ಸ್ಟೇ ಮಾಲೀಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ (Crime) ಆರೋಪ ಕೇಳಿಬಂದಿದೆ.

ಈ ಸಂಬಂಧ ಮಾ. 7 ರಂದು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪದ ಎಡದಂಡೆ ಕಾಲುವೆ ಬಳಿ ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ದೇಶ ಮತ್ತು‌ ವಿದೇಶಿ ಪ್ರವಾಸಿಗರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರು ಮೇಲೆ ಹಲ್ಲೆ ಮಾಡಿ ‌ನಾಲೆಗೆ ದೂಡಿದ್ದರು. ಉಳಿದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ. ಮಹಿಳೆಯರು ಸರ್ಕಾರಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.