Kasaragodu : ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ, ಆಟೋ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ!!

Share the Article

Kasaragodu: ಕಾಸರಗೋಡಿನಲ್ಲಿ ಇತ್ತೀಚಿಗೆ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಇಬ್ಬರು ನಾಪತ್ತೆಯಾಗಿದ್ದರು. ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅಚ್ಚರಿ ಎಂಬಂತೆ ಇದೀಗ ಇವರೀರ್ವರು ಶವವಾಗಿ ಪತ್ತೆಯಾಗಿದ್ದಾರೆ.

ಹೌದು, ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಸಮೀಪ ಆಟೋ ಚಾಲಕ ಪ್ರದೀಪ್(42) ಮತ್ತು 15 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ ೧೦. ೩೦ ರ ವೇಳೆಗೆ ಮೃತದೇಹ ಪತ್ತೆಯಾಗಿದೆ.

ಅಂದಹಾಗೆ ಫೆಬ್ರವರಿ 11ರಂದು ರಾತ್ರಿ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಕುಂಬಳೆ ಪೊಲೀಸರಿಗೆ ಬಾಲಕಿಯ ತಾಯಿ ದೂರು ನೀಡಿದ್ದರು. ಅವರಿಗೆ ಪೊಲೀಸರು ಹುಡುಕಾಟ ನಡೆಸಿದ್ದರೂ ಇಬ್ಬರು ಪತ್ತೆಯಾಗಿರಲಿಲ್ಲ. ಪೋಷಕರು ಹೈಕೋರ್ಟ್ ಮೊರೆ ಹೋಗಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಹುಡುಕಾಟ ನಡೆಸಿದಾಗ ಆಕೆಶಿಯಾ ಅರಣ್ಯದಲ್ಲಿ ಒಂದೇ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿವೆ.

Comments are closed.