Bengaluru : 40 ವರ್ಷಗಳ ಬಳಿಕ ಮೆಜೆಸ್ಟಿಕ್‌ನ BMTC, KSRTC ಬಸ್ ನಿಲ್ದಾಣಕ್ಕೆ ಹೊಸ ಸ್ಪರ್ಶ !! ತಲೆ ಎತ್ತಲಿವೆ 3 ಅಂತಸ್ತಿನ ಕಟ್ಟಡಗಳು

Share the Article

Bengaluru : ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ BMTC ಮತ್ತು KSRTC ಬಸ್ ನಿಲ್ದಾಣಕ್ಕೆ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತಾಗಿ ಸಚಿವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಹೌದು, 40 ವರ್ಷಗಳ ಇತಿಹಾಸ ಇರುವ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ (Mejestic Bus Station) ಹೊಸ ರೂಪ ಸಿಗಲಿದೆ. ಈ ಕುರಿತಾಗಿ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಅದೇ ಸ್ಥಳದಲ್ಲಿ ಮೂರ್ನಾಲ್ಕು ಅಂತಸ್ತಿನ ಬಿಲ್ಡಿಂಗ್ ಇಲ್ಲಿ ತಲೆ ಎತ್ತಲಿದ್ದು, ಇಲ್ಲಿಂದಲೇ ಬಸ್‌ಗಳ ಕಾರ್ಯಾಚರಣೆ ಆಗಲಿವೆ ಎನ್ನಲಾಗಿದೆ.

ಯಸ್, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಮೂರ್ನಾಲ್ಕು ಅಂತಸ್ತಿನ ಬಿಲ್ಡಿಂಗ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಚರ್ಚಿಸಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ನಕ್ಷೆ ತಯಾರಿಸುವ ಸಿದ್ಧತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ಐದಾರು ತಿಂಗಳಲ್ಲಿ ಬಸ್ ನಿಲ್ದಾಣದ ಬಿಲ್ಡಿಂಗ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಟೆಂಡರ್, ಇತರೆ ಪ್ರಕ್ರಿಯೆಗಳು ಪ್ರಾರಂಭವಾಗಲಿವೆ ಎನ್ನಲಾಗುತ್ತಿದೆ.

ಜೊತೆಗೆ ಮೆಟ್ರೋ, ರೈಲು ನಿಲ್ದಾಣಗಳಿಗೆ ಹೋಗುವ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಬಸ್ ನಿಲ್ದಾಣವನ್ನು ವಿನ್ಯಾಸ ಮಾಡುವ ಚಿಂತನೆ ಮಾಡಲಾಗುತ್ತಿದೆ. ಹೈಟೆಕ್ ಸ್ಪರ್ಶ ನೀಡುವುದರ ಜೊತೆಗೆ ಎಐ ಕ್ಯಾಮೆರಾಗಳು, ಪ್ಲಾಟ್‌ಫಾರಂಗಳಲ್ಲಿ ಎಲ್‌ಇಡಿ ಅಳವಡಿಸಿ ಹೊಸ ರೂಪ ನೀಡಲಿದ್ದಾರೆ

Comments are closed.