Actress Ranya Rao: ನಟಿ ರನ್ಯಾ ರಾವ್‌ ಅಕ್ರಮ ಚಿನ್ನ ಸಾಗಾಟ ಪ್ರಕರಣ; ಡಿಜಿಪಿ ರಾಮಚಂದ್ರ ರಾವ್‌ ವಿರುದ್ಧ ತನಿಖೆಗೆ ಗೃಹ ಇಲಾಖೆ ಆದೇಶ

Share the Article

Actress Ranya Rao: ನಟಿ ರನ್ಯಾ ರಾವ್‌ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್‌ ಅವರಿಗೆ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೊಟೋಕಾಲ್‌ ನೀಡಿದ ಕುರಿತು ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.

ಚಿನ್ನ ಸ್ಮಗ್ಲಿಂಗ್‌ ಪ್ರಕರಣದಲ್ಲಿ ರಾಮಚಂದ್ರ ರಾವ್‌ ಶಾಮೀಲು ಇದೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎನ್ನುವುದರ ಕುರಿತು ಒಂದು ವಾರದ ಒಳಗೆ ತನಿಖೆ ಮಾಡಲು ಸೂಚನೆ ನೀಡಲಾಗಿದೆ.

ನಟಿ ರನ್ಯಾ ಚಿನ್ನ ಸಾಗಾಟ ಮಾಡುವ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ಅವರ ಹೆಸರನ್ನು ಬಳಕೆ ಮಾಡಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಣ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುದು? ಈ ಕೇಸ್‌ನಲ್ಲಿ ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್‌ ಪಾತ್ರ ಏನು? ಇವೆಲ್ಲವುದರ ಕುರಿತು ತನಿಖೆ ನಡೆಸಲು ಅಧಿಕಾರಿಯನ್ನು ನೇಮಿಸಲಾಗಿದೆ.

Comments are closed.