Madhu Bangarappa : ಹೈಸ್ಕೂಲ್ ಶಿಕ್ಷಕರಿಗೆ ಗುಡ್ ನ್ಯೂಸ್ – ಶೀಘ್ರದಲ್ಲೇ ಪಿಯು ಉಪನ್ಯಾಸಕರಾಗಿ ಬಡ್ತಿ

Share the Article

Madhu Bangarappa : ರಾಜ್ಯ ಸರ್ಕಾರವು ಪ್ರೌಢಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದ್ದು ಪಿಯು ಉಪನ್ಯಾಸಕರಾಗಿ ಬಡ್ತಿ ನೀಡುವ ವಿಚಾರವಾಗಿ ಒಂದು ತಿಂಗಳಲ್ಲಿ ಜೇಷ್ಠತಾ ಪಟ್ಟಿಯನ್ನು ಸಿದ್ದಪಡಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹೌದು, ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿಯವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಜೇಷ್ಠತಾ ಪಟ್ಟಿ ತಡವಾಗಿರುವುದು ನಿಜ. ಆದರೆ ಬಡ್ತಿ ನೀಡುವ ಕುರಿತಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಯ ಹಂತದಲ್ಲಿ 4 ವಿಭಾಗಗಳ ಪ್ರೌಢಶಾಲಾ ಶಿಕ್ಷಕರ ಪಟ್ಟಿಯನ್ನು ಪಡೆದು ಕ್ರೋಢೀಕರಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಪಟ್ಟಿ ಸಿದ್ಧಪಡಿಸಿ ಬಡ್ತಿ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

Comments are closed.