Belagavi: ಎಂಇಎಸ್‌ ಪುಂಡರ ಹಾವಳಿ; ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ!

Share the Article

Belagavi: ಎಂಇಎಸ್‌ ಪುಂಡರ ಹಾವಳಿ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ರಾಡ್‌ನಿಂದ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಅವರ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಎಂಇಎಸ್‌ ಪುಂಡರು ಮಾರಣಾಂತಿಕ ಹಲ್ಲೆ ಮಾಡಲಾಗಿದೆ.

ಅಂಬೆವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗಪ್ಪ ಕೊಡಲಿ ಹಲ್ಲೆಗೆ ಒಳಗಾಗಿದ್ದರು. ತಲೆಗೆ ಹಾಗೂ ಕಾಲುಗಳಿಗೆ ರಾಡ್‌ನಿಂದ ಹಲ್ಲೆ ಮಾಡಲಾಗಿದೆ. ನಾಗಪ್ಪಾರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಕ್ರಿಯ ಜಿಲ್ಲಾ ಸಂಚಾಲಯ ಚೇತನ ಪಾಟೀಲ ಹಾಗೂ ವಿಕ್ರಂ ಯಳ್ಳೂರಕರ್‌ ಬೆಂಬಲಿಗರು ಕೃತ್ಯ ಎಸಗಿದ್ದಾರೆ.

Comments are closed.