Darshan: ‘ಡೆವಿಲ್’ ಚಿತ್ರದಿಂದ ಸ್ವಂತ ಅಕ್ಕನ ಮಗನಿಗೆ ಗೇಟ್ ಪಾಸ್ ಕೊಟ್ಟ ದರ್ಶನ್ – ನಿಜಕ್ಕೂ ಅಚ್ಚರಿ ಮೂಡಿಸುತ್ತೆ ಕಾರಣ

Share the Article

Darshan: ಜೈಲಿನಿಂದ ಬಿಡುಗಡೆಯಾದ ಬಳಿಕ ದರ್ಶನ್(Darshan) ಅವರು ಕೆಲವೊಂದು ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ ಇದೀಗ ದರ್ಶನ್ ಅವರು ತಮ್ಮ ಡೆವಿಲ್ ಚಿತ್ರಕ್ಕೆ ಸಂಬಂಧಿಸಿದಂತೆ ಪೋಸ್ಟ್ ಒಂದನ್ನು ಹಾಕಿದ್ದು ಇದರಲ್ಲಿ ತಮ್ಮ ಅಕ್ಕನ ಮಗನನ್ನು ಈ ಚಿತ್ರದಿಂದ ಹೊರಗಿಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗುವ ಮುನ್ನ ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ದರ್ಶನ್ ತೊಡಗಿಕೊಂಡಿದ್ದರು. ಸುಮಾರು 9 ತಿಂಗಳ ಬಳಿಕ ಪುನಃ ಶೂಟಿಂಗ್ ಪ್ರಾರಂಭಿಸಲಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರ ಅಕ್ಕನ ಮಗ ನಟಿಸಲಿದ್ದರು. ಆದರೆ ಅಭಿಮಾನಿ ಒಬ್ಬರು ದರ್ಶನ್ ಅಕ್ಕನ ಮಗನ ಕಾಲಿಗೆ ನಮಸ್ಕರಿಸಿದ ಹಿನ್ನೆಲೆಯಲ್ಲಿ ಈ ಕುರಿತಾಗಿ ಬಹಳ ನೊಂದಿರುವ ದರ್ಶನ್ ಅವರು ಈ ಒಂದು ಮಹತ್ವ ನಿರ್ಧಾರವನ್ನು ಕೈಗೊಂಡಿದ್ದಾರೆ. ಅಲ್ಲದೆ ಈ ಕುರಿತಾಗಿ ಇನ್ಸ್ಟಾಗ್ರಾಮ್ ಪೋಸ್ಟ್ ಕೂಡ ಮಾಡಿದ್ದಾರೆ

ದರ್ಶನ್ ಪೋಸ್ಟ್ ನಲ್ಲಿ ಏನಿದೆ?

ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ. ಅದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ. ಚಂದು ಅಥವಾ ನನ್ನ ಮಗ ವಿನೀಶ್​ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ. ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟ ಆಗುವುದಿಲ್ಲ’ ಎಂದು ದರ್ಶನ್ ಅವರು ಖಡಕ್ ಸಂದೇಶ ನೀಡಿದ್ದಾರೆ.

Comments are closed.