Crime: ಮೂಡುಬಿದಿರೆ : ಅಪ್ರಾಪ್ತಯ ಬಾಲಕಿಗೆ ವೃದ್ಧನಿಂದ ಲೈಂಗಿಕ ದೌರ್ಜನ್ಯ!

Crime: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿನ ದೌರ್ಜನ್ಯ ವೆಸಗಿದ ಆರೋಪಿಯೊಬ್ಬನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಪ್ರಕಾಶ್(57) ಎಂಬಾತ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮಂಕುಬೂದಿ ಎರಚಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಹತ್ತಿರದ ನಿವಾಸಿಯಾಗಿರುವ ಪ್ರಕಾಶ್ ಕಳೆದ ಒಂದು ವರ್ಷದಿಂದ ಮನೆಯಲ್ಲಿ ಇತರ ಯಾರು ಇಲ್ಲದ ಸಂದರ್ಭದಲ್ಲಿ ಬಾಲಕಿಯ ಮನೆಗೆ ಬರುತ್ತಿದ್ದು, ಬಾಲಕಿಯನ್ನು ಪುಸಲಾಯಿಸುತ್ತಿದ್ದನೆಂದು ತಿಳಿದುಬಂದಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪೋಕ್ಸ ಪ್ರಕರಣ (Crime) ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿಲಾಗಿದೆ.
Comments are closed.