Reservation: ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಸ್ಲಿಂ ಮೀಸಲಾತಿ ಶೇ.10 ಹೆಚ್ಚಳ ?!

Reservation : ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಮಗಾರಿಗಳ ಟೆಂಡರ್ ನಲ್ಲಿ ಶೇಕಡ 4 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸಚಿವ ಜಮೀರ್ ಅಹಮದ್ ಖಾನ್ ಅವರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೌದು, ಕರ್ನಾಟಕ ಬಜೆಟ್​​​ 2025ರಲ್ಲಿ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4ರಷ್ಟು ಕಾಮಗಾರಿ ಟೆಂಡರ್ ಮುಸ್ಲಿಮರಿಗೆ ಕೊಡಬೇಕು ಎಂದು ಕಾಯ್ದೆ ಜಾರಿ ಮಾಡಲಾಯಿತ್ತು. ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಈಗಿರುವ ಶೇ.4 ಶಿಕ್ಷಣ-ಉದ್ಯೋಗ ಮೀಸಲಾತಿ ಶೇ.10ಕ್ಕೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್‌ ವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದೆ. ಇದರ ಬೆನ್ನಲ್ಲಿಯೇ ಸಚಿವ ಜಮೀರ್ ಅಹಮದ್ ಖಾನ್ ಅವರು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Comments are closed.