Mangaluru: ಪೋಕ್ಸೋ ಪ್ರಕರಣ; ಆರೋಪಿ ಖುಲಾಸೆ

Share the Article

Mangaluru: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮೂಡುಬಿದಿರೆ ತಾಲೂಕು ವಾಲ್ಪಾಡಿ ಗ್ರಾಮದ ಉಮೇಶ್‌ ಶೆಟ್ಟಿ (55) ಎಂಬಾತನನ್ನು ನ್ಯಾಯಾಲಯವು ಪ್ರಕರಣದಿಂದ ಖುಲಾಸೆ ಮಾಡಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಮಾಡಿದ್ದು, ಈ ಕಾರಣದಿಂದ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾರೆ ಎನ್ನುವ ಆರೋಪವಿತ್ತು. ಈ ಕುರಿತು ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಪ್ರಕರಣದ ವಿಚಾರಣೆ ಮಾಡಿದ ಜಿಲ್ಲಾ ತ್ವರಿತಗತಿ ಹಾಗೂ ಪೋಕ್ಸೋ ನ್ಯಾಯಾಲಯವು ಆರೋಪಿಯ ಮೇಲಿನ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲಗೊಂಡಿದೆ ಎಂದು ತೀರ್ಮಾನಿಸಿ ಆರೋಪಿಯನ್ನು ಪ್ರಕರಣದಿಂದ ಖುಲಾಸೆ ಮಾಡಿದೆ.

Comments are closed.