Hyderabad : ದೇವಲಯಕ್ಕೆ ನುಗ್ಗಿ ಅರ್ಚಕನ ಮೇಲೆ ಆಸಿಡ್‌ ದಾಳಿ – ಗಂಭೀರ ಗಾಯ!!

Share the Article

Hyderabad : ಹೈದರಾಬಾದ್‌ನಲ್ಲಿ ದೇವಸ್ಥಾನಕ್ಕೆ ನುಗ್ಗಿ ಅರ್ಚಕರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಆಸಿಡ್ ದಾಳಿ ನಡೆಸಿದ ಘಟನೆ ನಡೆದಿದೆ.

ಸೈದಾಬಾದ್‌ನ ದೇವಸ್ಥಾನದ ಆವರಣದೊಳಗೆ ಅರ್ಚಕರು ಕುಳಿತಿದ್ದಾಗ ಏಕಾಏಕಿ ನುಗ್ಗಿಬಂದ ಅಪರಿಚಿತ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಅರ್ಚಕನ ಮೇಲೆ ಆಸಿಡ್ ಸುರಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ಅರ್ಚಕನಿಗೆ ಗಂಭೀರ ಸುಟ್ಟಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕೃತ್ಯದ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ.

Comments are closed.