Karkala: ಕಾರ್ಕಳ: ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

Share the Article

Karkala: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್<https://horticulturedir.karnataka.gov.in> ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ (Karkala) ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 8ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 16 ರಂದು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.