Mangaluru : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನ – ಜೈಲಿನಲ್ಲೇ ಆರೋಪಿ ಆತ್ಮಹತ್ಯೆ

Share the Article

Mangaluru : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹೌದು, ಪ್ರಕಾಶ್ ಗೋಪಾಲ ಮೂಲ್ಯ (51) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಭಾನುವಾರ ಮುಂಜಾನೆ ಸುಮಾರು 4- 4.50ರ ನಡುವೆ ಈ ಘಟನೆ ನಡೆದಿದ್ದು, ಶೌಚಾಲಯದ ಕಿಟಕಿಗೆ ನೇಣು ಬಿಗಿದು ಪ್ರಕಾಶ್ ಗೋಪಾಲ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿ ಪ್ರಕಾಶ್ ಗೋಪಾಲ ಮೂಲ್ಯ, ‌ಮೂಡುಬಿದಿರೆಯ ಲಾಡಿ ಎಂಬಲ್ಲಿ ವಾಸವಿದ್ದು, ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿದ್ದ.

ಆತ ಅದೇ ಪರಿಸರದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಮೂಡುಬಿದರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾ.11 ರಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಪ್ರಕಾಶ್ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಸಿಗುವುದಿಲ್ಲ, ತನ್ನನ್ನು ಯಾರೂ ಬಿಡಿಸಲು ಬರುವುದಿಲ್ಲ ಎಂದು ಜಿಗುಪ್ಸೆಗೊಂಡು ಸಾವಿಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.