Mangaluru : ಮಂಗಳೂರಲ್ಲಿ 75 ಕೋಟಿ ಮೌಲ್ಯದ ಎಂಡಿಎಂಎ ವಶ- ಇಬ್ಬರು ವಿದೇಶಿ ಮಹಿಳೆಯರ ಬಂಧನ

Mangaluru : ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಿಷೇಧಿತ ಮಾದಕ ಪದಾರ್ಥ ಎಂಡಿಎಂಎ ಮಾರಾಟದ ಭಾರಿ ಜಾಲವನ್ನು ಬೇಧಿಸಿದ್ದು ದಕ್ಷಿಣ ಆಫ್ರಿಕಾದ ಇಬ್ಬರು ಮಹಿಳಾ ಪ್ರಜೆಗಳನ್ನು ಬಂಧಿಸಿದ್ದಾರೆ.
‘ದಕ್ಷಿಣ ಆಫ್ರಿಕಾದ ಬಾಂಬಾ ಫಾಂಟಾ ಅಲಿಯಾಸ್ ಅಡ್ನೋಯಿಸ್ ಜಾಬುಲಿಲೆ (31 ) ಹಾಗೂ ಒಲಿಜೊ ಇಯಾನ್ಸ್ ಅಲಿಯಾಸ್ ಅಬಿಗೇಲ್ ಅಡ್ನೋಯಿಸ್ (30) ಬಂಧಿತರು. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದ ಅವರನ್ನು ಮಾರ್ಚ್ 14ರಂದು ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿನಗರದಲ್ಲಿ ವಶಕ್ಕೆ ಪಡೆಯಲಾಗಿದೆ. ಅವರಿಂದ 37.878 ಕೆ.ಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಅದರ ಮೌಲ್ಯ ₹75 ಕೋಟಿ ಎಂದು ಪೊಲೀಸರು ಅಂದಾಜಿಸಿದ್ದಾರೆ.
Comments are closed.