Yatnal: ಹೊಸ ಪಕ್ಷ ಸ್ಥಾಪನೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಯತ್ನಾಳ್!!

Yatnal: ರಾಜ್ಯ ಬಿಜೆಪಿಯಲ್ಲಿ ಒಳ ಜಗಳ ತಾರಕಕ್ಕೆ ಏರುತ್ತಿದೆ. ಯತ್ನಾಳ್ ಮತ್ತು ವಿಜಯೇಂದ್ರ ಅವರ ಬಣಗಳ ನಡುವಿನ ಕಾದಾಟ ಬೀದಿರಂಪವಾಗುತ್ತಿದೆ. ಈ ನಡುವೆ ಯತ್ನಾಳಿಗೆ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದರು ಕೂಡ ಅವರು ಯಾವುದಕ್ಕೂ ಸೊಪ್ಪು ಹಾಕುತ್ತಿಲ್ಲ. ಹೀಗಾಗಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಮಾತುಗಳು ಕೂಡ ಹಿಂದೆ ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಯತ್ನಾಳ ಅವರು ಹೊಸ ಪಕ್ಷ ಸ್ಥಾಪನೆ ಮಾಡುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಸ್ವತಃ ಯತ್ನಾಳ್ ಅವರೇ ಈ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ.
ಹೌದು ಹೊಸ ಪಕ್ಷ ಕಟ್ಟುವ ಕುರಿತು ಮಾತನಾಡಿರುವ ಯತ್ನಾಳ್ ಅವರು ನಾನು ಯಾವುದೇ ಹೊಸ ಪಕ್ಷವನ್ನು ಕಟ್ಟುವುದಿಲ್ಲ. ಬಿಜೆಪಿಯನ್ನೇ ಸರಿ ಮಾಡುತ್ತೇನೆ. ಹಿಂದುತ್ವದಿಂದ ದೂರ ಸರಿಯುತ್ತಿರುವ ಬಿಜೆಪಿಯನ್ನು ಮತ್ತೆ ಹಿಂದುತ್ವಕ್ಕೆ ಕರೆತರುತ್ತೇನೆ ಎಂದು ಪಣ ತೊಟ್ಟಿದ್ದಾರೆ.
ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಬಿಜೆಪಿಯು ಹಿಂದುತ್ವದ ಮೂಲಕ ಅಧಿಕಾರವನ್ನು ನೀಡಿದೆ. ಮುಂದೆ ಕರ್ನಾಟಕದಲ್ಲಿಯೂ ಕೂಡ ಹಿಂದುತ್ವದ ಮುಖಾಂತರವೇ ಬಿಜೆಪಿ ಅಧಿಕಾರದ ಕಾಣಿಕೆ ಏರಲಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನ ಮಾಡುತ್ತೇವೆ. ನಾವು ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ನಂಬಿ ಪಕ್ಷದಲ್ಲಿ ಇದ್ದೇವೆ. ಯಡಿಯೂರಪ್ಪ ಮತ್ತು ಅವರ ಮಕ್ಕಳನ್ನ ನಂಬಿ ಅಲ್ಲ ಎಂದು ಯತ್ನಾಳ್ ಹೇಳಿದ್ದಾರೆ.
Comments are closed.