Bangalore: ವೃದ್ಧ ತಂದೆ, ತಾಯಿಯ ಆಸ್ಪತ್ರೆಯಲ್ಲಿ ಬಿಟ್ಟು ಹೋದರೆ ಆಸ್ತಿ, ಉಯಿಲು ರದ್ದು- ಸರಕಾರದ ಆದೇಶ

Bangalore: ವಯಸ್ಸಾದ ತಂದೆ ತಾಯಿಯರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ಕರೆತಂದು ಮಕ್ಕಳು ಬಿಟ್ಟು ನಾಪತ್ತೆಯಾಗುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿದೆ. ಸಂಧ್ಯಾಕಾಲದಲ್ಲಿ ಹೆತ್ತ ತಂದೆ ತಾಯಿಯನ್ನು ಸಾಕಿ ಸಲಹದೆ ಈ ರೀತಿ ಮಾಡುವುದು ಅಮಾನವೀಯ ನಡೆಯಾಗಿರುವುದರಿಂದ ಪೋಷಕರಿಗೆ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ವಿಲ್ ಅನ್ನು ರದ್ದು ಪಡಿಸಲು ಕ್ರಮ ವಹಿಸುವಂತೆ ಸರಕಾರ ಅಧಿಕಾರಿಗಳಿಗೆ ಸೂಚಿಸಿದೆ.
ಈ ಕುರಿತು ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಯಸ್ಸಾದ ಕಾಲದಲ್ಲಿ ತಂದೆ-ತಾಯಿಯನ್ನೇ ಅನಾಥರನ್ನಾಗಿ ಮಾಡುವ ಮಕ್ಕಳಿಗೆ ತಕ್ಕ ಪಾಠ ಕಲಿಸಲು ನಿರ್ಧಾರ ಮಾಡಲಾಗಿದೆ. ಪೋಷಕರಿಂದ ವರ್ಗಾವಣೆ ಮಾಡಿಕೊಂಡಿರುವ ಆಸ್ತಿ, ವಿಲ್ ರದ್ದುಪಡಿಸುವಂತೆ ಆಯಾ ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸಲು ನಮ್ಮ ಇಲಾಖಾ ನಿರ್ದೇಶಕರಿಗೆ ಸೂಚಿಸಲಾಗಿದೆ.
Comments are closed.