Police case: ಮಂಗಳೂರು: ಕೋಮು ದ್ವೇಷ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ದ FIR!

Police case: ಮಾ.9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಹೆಣ್ಣು ಸಿಗದಿದ್ದರೆ ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು. ಈ ರೀತಿ ಪ್ರಚೋದನಕಾರಿ ಭಾಷಣ ಮಾಡಿ, ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು (Police case) ನೀಡಿದ್ದರು. ದೂರಿನ ಹಿನ್ನೆಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Comments are closed.