Bidar: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ!

Bidar: ಭಾಲ್ಕಿ ತಾಲೂಕಿನ ಆಳಂದಿ ಗ್ರಾಮದಲ್ಲಿ ಮಾ.18 ರ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾದ ಘಟನೆ ನಡೆದಿದೆ.

ಪ್ರಿಯಾಂಕಾ ಚವಾಣ್ (20) ಮೃತ ಯುವತಿ. ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಯನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ವರದಿಯಾಗಿದೆ. ಮನೆಯ ಬಾಡಿಗೆಗೆ ಸಂಬಂಧಪಟ್ಟಂತೆ ಮಾಲೀಕ ಪೀಡಿಸುತ್ತಿದ್ದ ಎಂಬ ಆರೋಪವಿದೆ. ಭಾಲ್ಕಿ ಗ್ರಾಮೀಣ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
Comments are closed.