BPL card: ಪಡಿತರ ಚೀಟಿದಾರರು ಆಹಾರಧಾನ್ಯ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು: ರಾಜ್ಯ ಸರ್ಕಾರ ಆದೇಶ

BPL card: ಪಡಿತರ ಚೀಟಿದಾರರು (BPL card) ತಮಗೆ ನೀಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲದಾರರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
Comments are closed.