Haveri: ಸ್ವಾತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Haveri: ಅನ್ಯಕೋಮಿನ ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನಿಂದಲೇ ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಮಾ.19 ರ ಬುಧವಾರ ಶಾಸಕ ಯು.ಬಿ.ಬಣಕಾರ್ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸ್ವಾತಿ ಹತ್ಯೆ ಪ್ರಕರಣ ವಿವರಿಸಿದ್ದು, ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಲಾಯಿತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 5 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
Comments are closed.