Central Government : ರಾಜ್ಯದ ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್ ನೀಡಿದ ಕೇಂದ್ರ ಸರ್ಕಾರ !!

Share the Article

Central Government : ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಬೇಕು ಎಂಬ ಅಡಿಕೆ ಬೆಳೆಗಾರರ ಬೇಡಿಕೆಯನ್ನು ಕೇಂದ್ರ ಸರ್ಕಾರ ಮತ್ತೆ ತಿರಸ್ಕರಿಸುವ ಮೂಲಕ ರಾಜ್ಯದ ಅಡಿಕೆ ಬೆಳೆಗಾರರಿಗೆ ಶಾಕ್ ನೀಡಿದೆ

 

ಹೌದು, ಅಡಿಕೆ ಮಂಡಳಿ ರಚಿಸಬೇಕೆಂಬುದು ನಾಡಿನ ಅಡಿಕೆ ಬೆಳೆಗಾರರ ಆಸೆ. ಈ ಕುರಿತಾಗಿ ಅನೇಕ ಅಡಿಕೆ ಬೆಳೆಗಾರರ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದವು. ಆದರೀಗ ಮಂಡಳಿ ರಚನೆಯ ಬೇಡಿಕೆಯನ್ನು ಕೇಂದ್ರ ಸರ್ಕಾರ ಸಾರಾಸಗಟಾಗಿ ತಳ್ಳಿಹಾಕಿದೆ. ಮಾರ್ಚ್ 18 ರಂದು ಲೋಕಸಭೆಯಲ್ಲಿ ದಾವಣಗೆರೆಯ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್, “ಅಂತಹ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿ ಇಲ್ಲ’ ಎಂದು ಹೇಳಿದ್ದಾರೆ. ಇದು ಈಗಾಗಲೇ ನಿಷೇಧದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ.

 

ಮಂಡಳಿ ಬೇಡ ಎನ್ನಲು ಕಾರಣ?

ಸರ್ಕಾರ ಮಂಡಳಿ ರಚನೆಯ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, ತನ್ನ ನಿರ್ಧಾರಕ್ಕೆ ನೀಡಿರುವ ಕಾರಣ, ಈಗಾಗಲೇ ಅಡಿಕೆ ಬೆಳೆ ಮತ್ತು ಬೆಳೆಗಾರರಿಗೆ ಸಂಬಂಧಿಸಿದಂತೆ ಕ್ಯಾಂಪ್ಕೊ, ಮ್ಯಾಮ್ಕೋಸ್ ಮುಂತಾದ ಸಹಕಾರ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಕಾಸರಗೋಡಿನ ಅಡಿಕೆ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದಂತಹ ಸಂಸ್ಥೆಗಳು ಬೆಳೆ ಸಂಶೋಧನೆ ಮತ್ತು ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಮಾರುಕಟ್ಟೆ ಅಥವಾ ಸಂಶೋಧನೆ ಸೇರಿದಂತೆ ಅಡಿಕೆಗೆ ಪ್ರತ್ಯೇಕ ಮಂಡಳಿಯ ಅಗತ್ಯವಿಲ್ಲ ಎಂದು ಕೇಂದ್ರ ಹೇಳಿದೆ ಎನ್ನಲಾಗಿದೆ.

 

Comments are closed.