Udupi: ಮೀನು ಕಳ್ಳತನ ಆರೋಪ; ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ!

ವಿಡಿಯೋ ವೈರಲ್‌

Share the Article

Udupi: ಕೃಷ್ಣನಗರಿ ಉಡುಪಿ ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ. ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಈ ಘಟನೆ ಉಡುಪಿ ತಾಲೂಕಿನ ಮಲ್ಪೆಯಲ್ಲಿ ನಡೆದಿದೆ.

ಮೀನು ಕದ್ದಿದ್ದಾಳೆ ಎನ್ನುವ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಜನರು ಹಲ್ಲೆ ಮಾಡಿದ್ದಾರೆ. ಮಹಿಳೆಯ ಕಪಾಳಕ್ಕೆ ಹೊಡೆದಿದ್ದಾರೆ, ಮರಕ್ಕೆ ಕಟ್ಟಿ ಹಾಕಿರುವ ಅಮಾನವೀಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿರುವ ಕುರಿತು ವರದಿಯಾಗಿದೆ.

Comments are closed.