Belthangady: ಬೆಳ್ತಂಗಡಿ: ನೇಣು ಬಿಗಿದುಕೊಂಡಿದ್ದ ವ್ಯಕ್ತಿ ಸಾವು!

Share the Article

Belthangady: ಬೆಳ್ತಂಗಡಿ (Belthangady) ತಾಲೂಕು ಕಾಶಿಪಟ್ಣ ಗ್ರಾಮದ ಕುಜಂಬೆಯಲ್ಲಿ ನೇಣು ಬಿಗಿದುಕೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

 

ಕುಜಂಬೆ ನಿವಾಸಿ ವಿಲ್ಫೆಡ್‌ ಫೆರ್ನಾಂಡಿಸ್‌ (51) ಅವರು ಸುಮಾರು 3-4 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಫೆ. 14ರಂದು ಬೆಳಗ್ಗೆ ಮನೆ ಸಮೀಪದ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದರು. ಅದನ್ನು ಕಂಡ ಸಹೋದರನು ಕೆಲಸದವರ ಜತೆ ಸೇರಿ ಕೆಳಗಿಳಿಸಿ ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಾ.18ರಂದು ಕೊನೆಯುಸಿರೆಳೆದಿದ್ದಾರೆ ಎಂದು ಸಹೋದರನು ಪೊಲೀಸರಿಗೆ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

Comments are closed.