DK Shivakumar: ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆವರೆಗೆ ಪಬ್‌ ತೆರೆಯಲು ಅವಕಾಶ-ಡಿಕೆಶಿ

DK Shivakumar: ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ ಒಂದು ಗಂಟೆಯವರೆಗೆ ಪಬ್‌ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭರವಸೆ ನೀಡಿರುವ ಕುರಿತು ವರದಿಯಾಗಿದೆ. ಬೆಂಗಳೂರು ನಗರ ಅಂತರಾಷ್ಟ್ರೀಯ ಖ್ಯಾತಿ ಹೊಂದಿದ್ದು, ಲೈವ್‌ ಆಗಿರಬೇಕು. ಹಾಗಾಗಿ ತಡರಾತ್ರಿ ಒಂದು ಗಂಟೆಯವರೆಗೆ ಪಬ್‌ ತೆರೆಯಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎನ್ನುವ ಭರವಸೆ ನೀಡಿದ್ದಾರೆ.

ಸದ್ಯಕ್ಕೆ ಬೆಂಗಳೂರಿನಲ್ಲಿ ಬೆಳಗ್ಗೆ 10 ರಿಂದ ರಾತ್ರಿ 11.30 ರ ತನಕ ಪಬ್‌ ಕಾರ್ಯಾಚರಣೆಗೆ ಅವಕಾಶವಿದೆ.

Comments are closed.