Gadaga: 19ರ ಯುವತಿಗೆ 42ರ ವ್ಯಕ್ತಿಯಿಂದ ಲವ್‌ ಟಾರ್ಚರ್‌- ವಿದ್ಯಾರ್ಥಿನಿ ದುರಂತ ಸಾವು!

Gadaga: 42ರ ಅಂಕಲ್‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್‌ನಲ್ಲಿ ನಡೆದಿದೆ.

ವಿರಪಾಪೂರ ತಾಂಡಾದ ನಿವಾಸಿ ವಂದನಾ (19) ಪಿನಾಯಿಲ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಂದನಾ ಗದಗದ ಜಿಮ್ಸ್‌ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್‌ ವ್ಯಾಸಂಗ ಮಾಡುತ್ತಿದ್ದಳು. ಸಮಾಜ ಕಲ್ಯಾಣ ಇಲಾಖೆ ಬೆಟಗೇರಿ ಡಾ.ಬಿ.ಆರ್.ಅಂಬೇಡ್ಕರ್‌ ಸರಕಾರಿ ಮೆಟ್ರಿಕ್‌ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೆಲ್‌ನಲ್ಲಿದ್ದುಕೊಂಡೇ ವ್ಯಾಸಂಗ ಮಾಡುತ್ತಿದ್ದಳು.

ಗುರುವಾರ ಹಾಸ್ಟೆಲ್‌ನಲ್ಲಿ ಪಿನಾಯಿಲ್‌ ಸೇವಿಸಿದ ಬಾಲಕಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವಿಗೀಡಾಗಿದ್ದಾಳೆ. ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಆರೋಪಿ ಕಿರಣ್‌ಗೆ ಮೊದಲೇ ಯುವತಿ ಮನೆಯವರು ತಾಕೀತು ಮಾಡಿದ್ದರು. ಎರಡು ಮನೆಯ ಕುಟುಂಬಸ್ಥರು ಹೇಳಿದ್ರೂ ಕಿರಣ್‌ ಕಿರುಕುಳ ನಿಂತಿರಲಿಲ್ಲ.

ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಕಿರಣ್‌ ಕಾರಬಾರಿ ಎಂದು ವಿದ್ಯಾರ್ಥಿನಿ ಮನೆಯವರು ದೂರು ನೀಡಿದ್ದಾರೆ. ಮೃತ ಬಾಲಕಿಯ ಕುಟುಂಬದವರು ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹ ಮಾಡಿದ್ದಾರೆ. ಆರೋಪಿ ಕಿರಣ್‌ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

Comments are closed.