Malpe: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

Malpe: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಅವರನ್ನು ಮಲ್ಪೆ ಪೊಲೀಸರು ಬಂಧನ ಮಾಡಿದ್ದಾರೆ.
ಈ ಘಟನೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸುರೇಶ್ ಹಾಗೂ ಕಾನ್‌ಸ್ಟೇಬಲ್ ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ.
ಈಗಾಗಲೇ ಬಂಧಿತರಾದ ಲಕ್ಷ್ಮೀಬಾಯಿ, ಸುಂದರ್, ಮತ್ತು ಶಿಲ್ಪಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಐದು ಮಂದಿಯನ್ನು ಈ ಪ್ರಕರಣದಲ್ಲಿ ಬಂಧನ ಮಾಡಲಾಗಿದೆ.
ಈ ಪ್ರಕರಣವನ್ನು ರಾಜೀ ಸಂಧಾನದಲ್ಲಿ ಮುಗಿಸಲು ಪ್ರಯತ್ನ ನಡೆಯುತ್ತಿರುವ ಕುರಿತು ವರದಿಯಾಗಿದೆ. ಆದರೆ ಇದನ್ನು ಕಾನೂನಿನ ಚೌಕಟ್ಟಿನಲ್ಲಿ ಮಾತ್ರ ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಘಟನೆ ಸಂಬಂಧ ಮಹಿಳಾ ಆಯೋಗ ಕೂಡಾ ಎಂಟ್ರಿ ನೀಡಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ ನೀಡಲಾಗಿರುವ ಕುರಿತು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸಲು ತಿಳಿಸಿದೆ.
Comments are closed.