Vitla: ವಿಟ್ಲ: ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

Vitla: ವಿಟ್ಲ( vitla) ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ವ್ಯಕ್ತಿ ಯೋರ್ವರ ಜಮೀನಿನಲ್ಲಿರುವ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಾ.21ರಂದು ನಡೆದಿದೆ.
ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ.ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದು, ಗುರುತು ಪತ್ತೆಹಚ್ಚಲು ಅಸಾಧ್ಯವಾದ ಸ್ಥಿತಿ ತಲುಪಿದೆ.
Comments are closed.