Narcotics: ಮಾದಕ ವಸ್ತು ಮಾರಾಟ ಹಾಗೂ ಸರಬರಾಜು: ಮೂವರು ಆರೋಪಿಗಳು ಅರೆಸ್ಟ್

Narcotics: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಹಾಗೂ ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ(Madikeri) ಪೊಲೀಸರು(Police) ಭೇದಿಸಿದ್ದಾರೆ. ಈ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎಮ್ಮೆಮಾಡು ಗ್ರಾಮದ ನಿವಾಸಿಗಳಾದ ಎಂ.ಹೆಚ್. ಸಾಧಿಕ್ (30), ಕೆ.ಎಂ. ಅಶ್ರಫ್ (44) ಮತ್ತು ಸರ್ಫುದ್ದೀನ್ (24) ಎಂಬುವವರು ಬಂಧಿತ ಆರೋಪಿಗಳು. ಇವರಿಂದ 10.37 ಗ್ರಾಂ ನಿಷೇಧಿತ ಮಾದಕ ವಸ್ತು ಎಂ.ಡಿ. ಎಂ.ಎ. ಮತ್ತು ಕೃತ್ಯಕ್ಕೆ ಬಳಸಿದ ಮಾರುತಿ ಬ್ರೀಝ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಮಾ. 20ರಂದು ಎಮ್ಮೆಮಾಡು ಗ್ರಾಮದ ಕುರುಳಿ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಎಂ.ಡಿ. ಎಂ.ಎ. ಅನ್ನು ಮಾರಾಟ ಹಾಗೂ ಸರಬರಾಜು ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಮಡಿಕೇರಿ ಡಿಎಸ್ಪಿ ಪಿ.ಎ. ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ (ಪ್ರಭಾರ) ಪಿ. ಅನೂಪ್ ಮಾದಪ್ಪ, ನಾಪೋಕ್ಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Comments are closed.