Free Bus: ಉಚಿತ ಬಸ್ ಪ್ರಯಾಣ – ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಸರಕಾರ!!

 

Free Bus: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವ ವೇಳೆ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಬಳಿಕ ಅವುಗಳನ್ನು ಅನುಷ್ಠಾನಗೊಳಿಸಿತು. ಈ ಪೈಕಿ ಮಹಿಳೆಯರಿಗೆ ಉಚಿತ ಬಸ್(Free Bus) ಪ್ರಯಾಣವಾದ ‘ಶಕ್ತಿ ಯೋಜನೆ'(Shakti Jojana) ಕೂಡ ಒಂದು. ಈ ಯೋಜನೆ ಅಡಿ ಇಂದು ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದೀಗ ಈ ಬೆನ್ನಲ್ಲೇ ಸರ್ಕಾರವು ಉಚಿತ ಬಸ್ ಪ್ರಯಾಣದ ಕುರಿತು ಮಹಿಳೆಯರಿಗೆ ಮತ್ತಷ್ಟು ಸಿಹಿ ಸುದ್ದಿಯನ್ನು ನೀಡಿದೆ.

 

ಹೌದು, ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಹೀಗಾಗಿ ಬಸ್ ಗಳಲ್ಲಿ ನೂಕು ನುಗ್ಗಲು ಉಂಟಾಗುತ್ತಿದ್ದು ಇದನ್ನು ತಡೆಯಲು ಸರ್ಕಾರ ಮಹತ್ವದ ಕ್ರಮವನ್ನು ಕೈಗೊಂಡಿದೆ. ಅದೇನೆಂದರೆ ಬಸ್ ಸಂಖ್ಯೆಯಲ್ಲಿ ಇನ್ನೂ ಹೆಚ್ಚು ಮಾಡಿ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗುವುದು ಇಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ

 

 ಈ ಕುರಿತಾಗಿ ಪೋಸ್ಟ್ ಮಾಡಿರುವ ಅವರು ‘ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

Comments are closed.