Mangaluru: ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್!

Mangaluru: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರನ್ನು ಸರಕಾರ ನೇಮಕ ಮಾಡಿದೆ. ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಆಡಳಿತಾತ್ಮಕ ಹಿತ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಕುಂದು ಕೊರತೆಗಳನ್ನು ಶೀಘ್ರವಾಗಿ ವಿಲೇ ಮಾಡಬೇಕೆಂಬ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಅವರನ್ನು ಪಾಲಿಕೆಯ ಆಡಳಿತಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಪರಿಷ್ಕೃತ ಆದೇಶವು ತಿಳಿಸಿದೆ.
ಪಾಲಿಕೆಯ ಚುನಾಯಿತ ಕೌನ್ಸಿಲ್‌ನ ಅಧಿಕಾರದ ಅವಧಿ ಫೆ.27,2025 ಕ್ಕೆ ಕೊನೆಗೊಂಡಿದೆ.
Comments are closed.