Vijayapura: SSLC ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ- ಓರ್ವ ಸಾವು, ಮೂವರು ವಿದ್ಯಾರ್ಥಿನಿಯರಿಗೆ ಗಾಯ!!

Vijayapura: ವಿಜಯಪುರ ಜಿಲ್ಲೆಯ ಕಗ್ಗೋಡೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಒಬ್ಬ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮೂರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ತೆಲಂಗಾಣ ಮೂಲದ ಲಾರಿ ಡಿಕ್ಕಿಯಾದ ಪರಿಣಾಮ ವೆಂಕು ಚವ್ಹಾಣ್ (42) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯರಾದ ಐಶ್ವರ್ಯ, ಪ್ರೀತಿ, ಶ್ವೇತಾ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Comments are closed.